
ಮಾನ್ವಿ:
ಪಟ್ಟಣದ ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆಯ ಎಸ್‌ಆರ್‌ಎಸ್‌ವಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಾತಪ್ಪ ತಳಕಲ್ಲು ಅವರು ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ರೂ5ಸಾವಿರ ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.
ರಾಜ್ಯ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ(ರುಪ್ಸ) ವತಿಯಿಂದ ಬೆಂಗಳೂರಿನಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭುದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರ ಸಾಹುಕಾರ ಮತ್ತು ಒಕ್ಕೂಟದ ಪದಾಧಿಕಾರಿಗಳು ಮುಖ್ಯ ಶಿಕ್ಷಕ ಜಾತಪ್ಪ ತಳಕಲ್ಲು ಅವರಿಗೆ ಪ್ರಶಸ್ತಿಯ ಸ್ಮರಣಿಕೆ ಹಾಗೂ ರೂ5ಸಾವಿರ ಚೆಕ್ ವಿತರಿಸಿದರು. ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಜಾತಪ್ಪ ತಳಕಲ್ಲು ಅವರನ್ನು ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ತಿಮ್ಮಯ್ಯ ಶೆಟ್ಟಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.