ಮಾನ್ವಿ : ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಪಾವತಿ ಮಾಡುವಂತೆ ಕಿರುಕುಳ ಮಾಡುತ್ತಿದ್ದು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಬೈಲ್ ಮರ್ಚೇಡ್ ಒತ್ತಾಯಿಸಿದ್ದಾರೆ
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಗುಲ್ಬರ್ಗ ವಿಶ್ವವಿದ್ಯಾಲಯ ಪರೀಕ್ಷೆಗಳ ದಿನಾಂಕ ಮತ್ತು ಪರೀಕ್ಷೆಯ ಶುಲ್ಕಗಳು ಕಟ್ಟಲು ದಿನಾಂಕ ಸೂಚಿಸಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆ ಶುಲ್ಕ ಕಟ್ಟಲು ಹೊದರೆ ವಿದ್ಯಾರ್ಥಿಗಳ ಸ್ಟೂಡೆಂಟ್ ಪೋರ್ಟಲ್ ಗಳನ್ನು ಬ್ಲಾಕ್ ಮಾಡಿ ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕ ಕಟ್ಟಿದರೆ ಮಾತ್ರ ನಿಮ್ಮ ಸ್ಟೂಡೆಂಟ್ ಪೋರ್ಟಲ್ ಗಳನ್ನು ಒಪನ್ ಮಾಡುತ್ತವೆ ಎಂದು ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕದ ಹೆಸರಿನಲ್ಲಿ ಹಣ ವಸೂಲಿಗೆ ಮುಂದಾಗಿದ್ದು .
ಕಳೆದ 2 ವರ್ಷಗಳಿಂದ ಕೋವಿಡ್ ನಿಂದಾಗಿ ದೇಶದ ಮತ್ತು ರಾಜ್ಯದ ಜನತೆಯು ಬಹಳ ಆರ್ಥಿಕ ಸಂಕಷ್ಟಗಳು ಎದುರಿಸುತ್ತಿದ್ದಾರೆ ಎಂದು ಗೊತ್ತಿದ್ದರು ಸಹ ಬಡ ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕ ಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಇದರಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಭಯ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮಗಳ ಬೀರುತ್ತವೆ ಆದ್ದರಿಂದ ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ನರಸಪ್ಪ ಸಿಂಗನೊಡಿ. ಲಿಂಗರಾಜ, ರಾಜು ಮನ್ಸಲಾಪೂರ,ಸೇರಿದಂತೆ ಇತರರು ಉಪಸ್ಥಿತರಿದ್ದರು.