ಸಿಂಧನೂರು, ಅ3:ಸಿಂಧನೂರು ನಗರದಲ್ಲಿ ಇಂದು ಪೊಲೀಸ್ ಇಲಾಖೆಯ ವತಿಯಿಂದ ಅಪಘಾತಗಳ ತಡೆಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಉಮೇಶ ಕಾಂಬ್ಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ ಅಪಘಾತಗಳನ್ನು ತಡೆಯಲು ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಸಾರಿಗೆ ಬಸ್, ಆಟೋ ರಿಕ್ಷಾ, ಟಂ ಟಂ ವಾಹನಗಳಿಗೆ ಸಂಚಾರಿ ನಿಯಮಗಳ ಪಾಲನೆ ಹಾಗೂ ಅಪಘಾತ ತಡೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸುವ ಮಾಹಿತಿ ಹೊಂದಿರುವ ಕರಪತ್ರಗಳನ್ನು ಅಂಟಿಸಲಾಯಿತು. ಸಿಂಧನೂರು ಟ್ರಾಫಿಕ್ ( ಸಂಚಾರ ವಿಭಾಗ) ಪಿಎಸ್ಐ ಎರಿಯಪ್ಪ, ನಗರ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ, ಆಟೋ ಚಾಲಕರು ಭಾಗವಹಿಸಿದ್ದರು.