ಸಿಂಧನೂರು:ಹಿರಿಯ ಪತ್ರಕರ್ತ ಪ್ರಹ್ಲಾದ ಗುಡಿ ಅವರಿಗೆ ಶಾಸಕ ವೆಂಕಟರಾವ್ ನಾಡಗೌಡ ಸನ್ಮಾನ

ಸಿಂಧನೂರು,ಅ3: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2019 ನೆ ಸಾಲಿನ ರಾಜ್ಯ ಮಟ್ಟದ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿರುವ ಸಿಂಧನೂರು ನಗರದ ‘ಕನ್ನಡ ಪ್ರಭ’ ದಿನಪತ್ರಿಕೆಯ  ವರದಿಗಾರರು ಹಾಗೂ ಹಿರಿಯ ಪತ್ರಕರ್ತರಾದ ಪ್ರಹ್ಲಾದ ಗುಡಿ ಅವರನ್ನು ಶಾಸಕ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಭಾನುವಾರ ಸನ್ಮಾನಿಸಿ ಅಭಿನಂದಿಸಿದರು.
ಸಿಂಧನೂರು ನಗರದ ಜೆಡಿಎಸ್ ಪಕ್ಷದ ಯುವ ಘಟಕದ ಕಾರ್ಯಾಲಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಶಾಸಕ  ವೆಂಕಟರಾವ್ ನಾಡಗೌಡ ಅವರು ಹಿರಿಯ ಪತ್ರಕರ್ತ ಪ್ರಹ್ಲಾದ ಗುಡಿ, ಸಿಂಧನೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭೀಮನಗೌಡ ಪಾಟೀಲ ಕೋಳಬಾಳ, ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಜೆಯಾಗಿರುವ ದೇವೇಂದ್ರಗೌಡ ಹೊಸಳ್ಳಿ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ತಾಲೂಕ ಮಟ್ಟದ ಜೆಡಿಎಸ್ ಪಕ್ಷದ ಎಲ್ಲಾ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮುಖಂಡರುಗಳು ಉಪಸ್ಥಿತರಿದ್ದರು.