ಪಿಯು ಕಾಲೇಜುಗಳಿಗೆ ಅಕ್ಟೋಬರ್ 10ರಿಂದ 17ರವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು ಅ.8 : 2021-22 ನೇ ಶೈಕ್ಷಣಿಕ  ವರ್ಸಾಷಲಿಗೆ ಸಂಬಂಧಿಸಿದಂತೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಿಗೆ ಅಕ್ಟೋಬರ್ 10 ರಿಂದ ಅಕ್ಟೋಬರ್ 17 ರವರೆಗೆ ದಸರಾ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, 2021-22 ಶೈಕ್ಷಣಿಕ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆ ದಸರಾ ರಜೆಯನ್ನು ಅಕ್ಟೋಬರ್ 10ರಿಂದ 17ರವರೆಗೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಅ.18ರಿಂದ ತರಗತಿಗಳನ್ನು ಪುನಾರಂಭಿಸಲು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಅವರು ಸೂಚನೆ ನೀಡಿದ್ದಾರೆ.ಬೆಂಗಳೂರು ಅ.8 : 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಿಗೆ ಅಕ್ಟೋಬರ್ 10 ರಿಂದ 17 ರವರೆಗೆ ದಸರಾ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, 2021-22 ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅಕ್ಟೋಬರ್ 10ರಿಂದ 17ರವರೆಗೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಅ.18ರಿಂದ ತರಗತಿಗಳನ್ನು ಪುನರಾರಂಭಿಸಲು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಅವರು ಸೂಚನೆ ನೀಡಿದ್ದಾರೆ.