ರಾಯಚೂರು ಅ.09: ಇಂದು ರಾಯಚೂರು ನಗರದ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯಲ್ಲಿ 2021-22 ನೇ ಸಾಲಿನ ಪ್ರಥಮ ವರ್ಷದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ್, ‘ವಿದ್ಯಾರ್ಥಿಗಳು ಆಸಕ್ತಿ, ಶ್ರದ್ಧೆ ಹಾಗೂ ಪರಿಶ್ರಮದಿಂದ ಅಧ್ಯಯನ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು. ‘ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಜ್ಣಾನಗಂಗಾ ಶಿಕ್ಷಣ ಸಂಸ್ಥೆಯ ಸೇವೆ ಶ್ಲಾಘನೀಯ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಎನ್. ನರಸಪ್ಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ವಕ್ತಾರರಾದ ಎ.ವಸಂತ ಕುಮಾರ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ , ಪ್ರಾಧಿಕಾರದ ಸದಸ್ಯರಾದ ಪಿ ಯಲ್ಲಪ್ಪ. ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ರಾಜಾ ಶ್ರೀನಿವಾಸ ಮತ್ತಿತರರು ಇದ್ದರು.