ರಾಯಚೂರು: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಪ್ರಶಸ್ತಿ ಪ್ರದಾನ

ರಾಯಚೂರು ನ.18: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಕ್ಕಳು ಅನೇಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಾರಣ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ಉತ್ತಮವಾಗಿ ಸೇವೆ ಸಲ್ಲಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ರಾಜ್ಯಪಾಲರ ಗೌರವ ಪ್ರಶಸ್ತಿಗಳನ್ನು ಘೋಷಿಸಿದ್ದರು. ಇಂದು ಆ ಪ್ರಶಸ್ತಿಗಳನ್ನು ರಾಯಚೂರಿನ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತರಾದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ   ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು.

ಮಾನ್ವಿಯ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ಅಂಬಣ್ಣ ನಾಯಕ ಹಾಗೂ ಪುರಸಭೆಯ ಹಿರಿಯ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ರಾಜಾ ಮಹೇಂದ್ರ ನಾಯಕ ಅವರ ಪುತ್ರಿ ರಾಣಿ ಲಹರಿಕಾ ದೇವಿ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮುಖ್ಯ ಆಯುಕ್ತೆ ಅಜೀಜಾ ಸುಲ್ತಾನ,ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಗದಗಿನ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಸವರಾಜ್ ಬೋರೆಡ್ಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಮಾನ್ವಿ ಘಟಕದ ಅಧ್ಯಕ್ಷ ಬಲರಾಮಕೃಷ್ಣ,ಜಂಟಿ ಕಾರ್ಯದರ್ಶಿ ನರಸಿಂಹ ಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾ ಸಂಸ್ಥೆ ಪದಾಧಿಕಾರಿಗಳು ಹಾಗೂ ಮಾನ್ವಿ ಸ್ಕೌಟ್ಸ್ ಗೈಡ್ಸ್ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.