ಡಿ.8ರ ಸಂಜೆ 4ಗಂಟೆಯಿಂದ ಡಿ.10ರ ಮಧ್ಯರಾತ್ರಿ 12ವರೆಗೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಡಾ. ಅವಿನಾಶ್

ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್

ರಾಯಚೂರು,ನ.27:- ಜಿಲ್ಲೆಯಲ್ಲಿ ಮದ್ಯ ಮಾರಾಟ, ಶೇಖರಣೆ, ಹೊರಗಿನಿಂದ ತಂದು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಬಿಯರ್, ಬಾರ್‌ಗಳು, ಮತ್ತು ಮದ್ಯ ಡಿಪೋಗಳನ್ನು ಡಿ.8ರ ಸಾಯಂಕಾಲ 4ಗಂಟೆಯಿಂದ ಡಿ10ರ ಮಧ್ಯರಾತ್ರಿ 12ಗಂಟೆಯವರೆಗೆ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135(ಸಿ) ಹಾಗೂ ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10(ಬಿ) ಅಡಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಆದೇಶ ಹೊರಡಿಸಿದ್ದಾರೆ.