ಮಾನ್ವಿ: ಎಸ್‌ಎಂವಿ ಓಲೇಕಾರ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಶಿಕ್ಷಣದಿಂದ ಸಮಾನತೆ ಸಾಧ್ಯ-ಶಾಸಕ ರಾಜಾ ವೆಂಕಟಪ್ಪ ನಾಯಕ
ಮಾನ್ವಿ ಡಿ.04: ‘ಎಲ್ಲಾ ವರ್ಗಗಳ ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಶನಿವಾರ ಪಟ್ಟಣದ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಶ್ರೀಮೈಲಾರಪ್ಪ ವೆಂಕಟಪ್ಪ ಓಲೇಕಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಹಾಗೂ ಆಸಕ್ತಿಯಿಂದ ಅಧ್ಯಯನ ಮಾಡಬೇಕು. ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಗುರಿ ಹಾಗೂ ಕನಸುಗಳೊಂದಿಗೆ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ಅವರು ಸಲಹೆ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  ವೈದ್ಯ ಡಾ.ಎಂ.ವೀರಣ್ಣ ಹಾಗೂ ಪಿ.ರವಿಕುಮಾರ ವಕೀಲ ಅವರು ವಿಶೇಷ ಉಪನ್ಯಾಸ ನೀಡಿದರು. ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಕ್ಕೀರಪ್ಪ ಓಲೇಕಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಪ್ಪ ಜಗ್ಲಿ ಪ್ರಾಸ್ತಾವಿಕ ಭಾಷಣ ಮಾಡಿ, ಸಂಸ್ಥೆಯ ಬೆಳವಣಿಗೆ ಕುರಿತು ವಿವರಿಸಿದರು. ಸಂಸ್ಥೆಯ ಕಾರ್ಯದರ್ಶಿ ಮಹಾಂತೇಶ ಓಲೇಕಾರ, ಪುರಸಭೆಯ ಮಾಜಿ ಅಧ್ಯಕ್ಷ ಕೆ.ಬಸವಂತಪ್ಪ, ಪುರಸಭೆಯ ಸದಸ್ಯ ಇಬ್ರಾಹಿಂ ಬಾಷಾ, ಪ್ರಗತಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸವರಾಜ ಭೋಗಾವತಿ, ಪಕ್ಷಿಪ್ರೇಮಿ ಸಲಾವುದ್ದೀನ್ ಗುತ್ತೇದಾರ, ರೆಡ್ ಭಾರತೀಯ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಹಿಬೂಬ ಮದ್ಲಾಪುರ, ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜು ಪ್ರಾಂಶುಪಾಲ ಶಂಕ್ರಪ್ಪ ನಕ್ಕುಂದಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಎಂ.ಡಿ.ಅಸ್ರಾರ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಪಾಟೀಲ್, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನಗೌಡ ಬಲ್ಲಟಗಿ, ಪ್ರಧಾನ ಕಾರ್ಯದರ್ಶಿ ಜೆ.ಎಚ್.ದೇವರಾಜ ಇದ್ದರು. ನೀಲಾಂಬಿಕಾ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಉಪನ್ಯಾಸಕರಾದ ಶರಣಮ್ಮ ಹಾಗೂ ರವಿಚಂದ್ರ ನಿರೂಪಿಸಿದರು. ಕಲ್ಯಾಣಿ  ಸ್ವಾಗತಿಸಿದರು. ಆನಂದ ವಂದಿಸಿದರು.