ಕೋವಿಡ್ ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಶಾಸಕ ಬಸನಗೌಡ ದದ್ದಲ ಪರಿಹಾರ ಚೆಕ್ ವಿತರಣೆ

ಮಾನ್ವಿ ಡಿ.27: ತಾಲ್ಲೂಕಿನ ಕುರ್ಡಿ ಹೋಬಳಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಮಂಜೂರಾದ ಪರಿಹಾರದ ಚೆಕ್‌ಗಳನ್ನು ಶಾಸಕ ಬಸನಗೌಡ ದದ್ದಲ ಸೋಮವಾರ ವಿತರಿಸಿದರು. ನಂತರ ಮಾತನಾಡಿದ ಶಾಸಕ ಬಸನಗೌಡ ದದ್ದಲ,’ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕುರ್ಡಿ ಹೋಬಳಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ 6ಜನರ ಕುಟುಂಬಗಳಿಗೆ ತಲಾ ರೂ1ಲಕ್ಷ ಮೊತ್ತದ ಪರಿಹಾರ ಮಂಜೂರಾಗಿದೆ. ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಹೋಬಳಿಗಳಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕವಾಗಿ ನೆರವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಪರಿಹಾರ ಮಂಜೂರು ಮಾಡಿಸಲಾಗಿದೆ’ ಎಂದು ತಿಳಿಸಿದರು. ತಹಶೀಲ್ದಾರ್ ಪರಶುರಾಮ, ಗ್ರೇಡ್-೨ ತಹಶೀಲ್ದಾರ್ ಅಬ್ದುಲ್ ವಾಹಿದ್, ಉಪತಹಶೀಲ್ದಾರ್ ಅಬ್ದುಲ್ ರೌಫ್, ಕಂದಾಯ ನಿರೀಕ್ಷಕ ಮಹೇಶ ಪಾಟೀಲ್, ಗ್ರಾಮ ಲೆಕ್ಕಾಧಿಕಾರಿ ಇರ್ಫಾನ್ ಅಲಿ ಇದ್ದರು.