
ಮಾನ್ವಿ.ಜ.17: ಭಾರತೀಯ ಜನತಾ ಪಕ್ಷದ ಮಹಾಶಕ್ತಿ ಕೇಂದ್ರದ ಮಾನ್ವಿ ನಗರ ಘಟಕದ ಅಧ್ಯಕ್ಷರಾಗಿ ಶ್ರೀಕಾಂತ ಪಾಟೀಲ್ ಗೂಳಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಶ್ರೀಕಾಂತ ಪಾಟೀಲ್ ಗೂಳಿ, ‘ಬಿಜೆಪಿ ಪಕ್ಷದ ಹಿರಿಯ ಮುಖಂಡರು ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರ ಬೆಂಬಲ, ಸಹಕಾರದಿಂದ ಪಕ್ಷದ ಸಂಘಟನೆಗೆ ಶ್ರಮಿಸುವೆ’ ಎಂದರು.