ಮಾನ್ವಿ ಜ.30 : ಇಂದು ಮಾನ್ವಿ ಪಟ್ಟಣದಲ್ಲಿ ನಡೆದ ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ಆರ್.ಮುತ್ತುರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಬಿ.ರಾಘವೇಂದ್ರ ಶೆಟ್ಟಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಮುಂದಿನ 3 ವರ್ಷಗಳ ಅವಧಿಗೆ ಇವರು ಅಧಿಕಾರ ಹೊಂದಿರುತ್ತಾರೆ. ಸಂಘದ ಸರ್ವ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.