ಮಾನ್ವಿ: ಮಲ್ಲನಗೌಡ ನಕ್ಕುಂದಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ

ಮಲ್ಲನಗೌಡ ಬಿ.ಪಾಟೀಲ್ ನಕ್ಕುಂದಿ

ಮಾನ್ವಿ ಮಾ.17: ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಾನ್ವಿಯ ಟಿಎಪಿಸಿಎಂಎಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಮಲ್ಲನಗೌಡ ಬಿ.ಪಾಟೀಲ್ ನಕ್ಕುಂದಿ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯು ರಾಜ್ಯ ಮಟ್ಟದ ‘ಸಹಕಾರ ರತ್ನ’ ಪ್ರಶಸ್ತಿ ಘೋಷಿಸಿದೆ ಎಂದು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ . ಮಾರ್ಚ್ 20 ರಂದು ಬೆಂಗಳೂರಿನ ಗಣೇಶ ಮೈದಾನದಲ್ಲಿ ನಡೆಯುವ’ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಲ್ಲನಗೌಡ ಬಿ. ಪಾಟೀಲ್ ನಕ್ಕುಂದಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.                    ಅಭಿನಂದನೆ: ‘ ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿರುವ ‌ಮಲ್ಲನಗೌಡ ಬಿ.ಪಾಟೀಲ್ ನಕ್ಕುಂದಿ ಅವರನ್ನು ಮಾನ್ವಿ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಗಣ್ಯರು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.