ಮಾನ್ವಿ: ಕರ್ನಾಟಕ ಶಾಲೆಯ 28ನೇ ವಾರ್ಷಿಕೋತ್ಸವ ಸಮಾರಂಭ

ನೈತಿಕ ಮೌಲ್ಯಗಳ ಜಾಗೃತಿ ಅವಶ್ಯ: ಶಿಕ್ಷಕಿ ವೀರಮ್ಮ

ಮಾನ್ವಿ ಮಾ.19: ‘ಪ್ರಸ್ತುತ ಸಂದರ್ಭದಲ್ಲಿ ಮೌಲ್ಯಾಧಾರಿತ ಶಿಕ್ಷಣದ ಮೂಲಕ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಅವಶ್ಯ’ ಎಂದು ಶಿಕ್ಷಕಿ ವೀರಮ್ಮ ಸೀಕಲ್ ಹೇಳಿದರು. ಶನಿವಾರ ಮಾನ್ವಿ  ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಶಿಕ್ಷಣ ಸಂಸ್ಥೆಯ ಕರ್ನಾಟಕ ಶಾಲೆಯ 28ನೇ ವಾರ್ಷಿಕೋತ್ಸವ ಹಾಗೂ ೭ನೇ ತರಗತಿ ವಿದ್ಯಾಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಮಹತ್ವದ್ದಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸೈಯದ್ ತಾಜುದ್ದೀನ್ ಅವರು ಸಂಸ್ಥೆಯ ಹುಟ್ಟು, ಬೆಳವಣಿಗೆ ಮತ್ತು ಸಾಧನೆಗಳ ಕುರಿತು ವಿವರಿಸಿದರು. ಫಾದರ್ ಟಿ.ಜ್ಞಾನಪ್ರಕಾಶಂ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚನ್ನಬಸವ ಬಾಗಲವಾಡ, ಶಾಲೆಯ ಮುಖ್ಯ ಶಿಕ್ಷಕ ಬಸನಗೌಡ ಮತ್ತಿತರರು ಇದ್ದರು. ಶೇಖ್ ಅವೇಜ್ ಕುರಾನ್ ಪಠಿಸಿದರು. ಶಿಕ್ಷಕ ಕಾಳಪ್ಪ ನಿರೂಪಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.