ಮಾನ್ವಿ: ಎಸ್ಎಂವಿ ಓಲೇಕಾರ ಪಿಯು ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ
ಮಾನವೀಯ ಮೌಲ್ಯಗಳ ಪಾಲನೆ ಅಗತ್ಯ: ಸೈಯದ್ ಮಿನಾಜುಲ್ ಹಸನ್
ಮಾನ್ವಿ ಮಾ.22:‘ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಶಿಕ್ಷಣದ ಜತೆಗೆ ನೈತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸೈಯದ್ ಮಿನಾಜುಲ್ ಹಸನ್ ಹೇಳಿದರು.
ಇಂದು ಮಾನ್ವಿ ಪಟ್ಟಣದ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಎಸ್ಎಂವಿ ಓಲೇಕಾರ ಪಿಯು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ‘ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಪದವಿಗಳಂತಹ ಸ್ಥಾನ ತಲುಪುವ ಗುರಿ ಹೊಂದಿರಬೇಕು. ನಿರಂತರ ಪರಿಶ್ರಮ ಹಾಗೂ ಆಸಕ್ತಿಯಿಂದ ಅಧ್ಯಯನ ಮಾಡಿ ಉನ್ನತ ಸಾಧನೆ ಮಾಡಿ ಹೆತ್ತ ತಂದೆ ತಾಯಿಗಳಿಗೆ ಹಾಗೂ ವಿದ್ಯೆ ಕಲಿಸಿದ ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು’ ಎಂದು ಅವರು ಸಲಹೆ ನೀಡಿದರು.
ಉಪನ್ಯಾಸಕಿ ಶರಣಮ್ಮ ಹಾಗೂ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲಗೌಡ ಕಾರ್ಯಕ್ರಮ ಉದ್ಘಾಟಿಸಿದರು. ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಕ್ಕೀರಪ್ಪ ಓಲೇಕಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಮಹಾಂತೇಶ ಓಲೇಕಾರ, ಕಾಲೇಜಿನ ಪ್ರಾಂಶುಪಾಲ ಬಾಲಪ್ಪ ಜಗ್ಲಿ, ನೀರಮಾನ್ವಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಡೇವಿಡ್, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಸುರೇಶ ಕುರ್ಡಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ತಾಯಪ್ಪ ಬಿ.ಹೊಸೂರು, ವೆಂಕಟೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಶಂಕ್ರಪ್ಪ ನಕ್ಕುಂದಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಡಿ.ಅಸ್ರಾರ್ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಪಾಟೀಲ್ ಇದ್ದರು. ಉಪನ್ಯಾಸಕ ರಂಗಪ್ಪ ಗೋರ್ಕಲ್ ನಿರೂಪಿಸಿರು. ನಂದಿನಿ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಸುರೇಖಾ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕ ಅಬ್ದುಲ್ ರಹೀಮ್ ವಂದಿಸಿದರು.