ಸಿಂಧನೂರು: ಸಂಗ್ರಾಮ್ ನಾರಾಯಣ ಕಿಲ್ಲೇದ್ ನೇತೃತ್ವದಲ್ಲಿ ನೂರಾರು ಯುವಕರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಸಿಂಧನೂರು ಏ.10: ಸಿಂಧನೂರು ತಾಲೂಕಿನಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯುವಪಡೆಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದು ತಾಲೂಕಿನಾದ್ಯಂತ ಪಕ್ಷದ ತತ್ವ ಸಿದ್ಧಾಂತವನ್ನು ಮೆಚ್ಚಿ ನಿತ್ಯ ನೂರಾರು ಯುವಕರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ಸಂಗ್ರಾಮ್ ನಾರಾಯಣ ಕಿಲ್ಲೇದ್ ಹೇಳಿದರು. ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಆಮ್ ಆಯ್ಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಸಿಂಧನೂರು ನಗರದ ವಾರ್ಡ್‌ ನಂ , 20,21,22 ಹಾಗೂ 23 ರ ನೂರಾರು ಯುವಕರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು . ಯುವಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಂಗ್ರಾಮ ನಾರಾಯಣ ಕಿಲ್ಲೇದ್, ಭ್ರಷ್ಟಾಚಾರರಹಿತ ಸರಕಾರವನ್ನು ರಾಜ್ಯದಲ್ಲಿ ಮತ್ತು ತಾಲೂಕಿನಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಕ್ಷ ಸೇರ್ಪಡೆಗೊಳ್ಳುತ್ತಿದ್ದು ತಾಲೂಕಿನಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ತರಲಾಗುವುದು ಎಂದು ಹೇಳಿದರು . ಈ ಸಂದರ್ಭದಲ್ಲಿ ಅನೇಕ ಯುವಕರು ಉಪಸ್ಥಿತರಿದ್ದರು .