ಮಾನ್ವಿ: ಕನ್ನಡ ಸಾಹಿತ್ಯ ಪರಿಷತ್ತಿಗೆ ರೂ.25ಸಾವಿರ ದೇಣಿಗೆ ನೀಡಿದ ಮನ್ಸಾಲಿ ವೆಂಕಯ್ಯ ಶೆಟ್ಟಿ

ಮಾನ್ವಿ: ಕನ್ನಡ ಸಾಹಿತ್ಯ ಪರಿಷತ್ತಿಗೆ ರೂ.25ಸಾವಿರ ದೇಣಿಗೆ ನೀಡಿದ ಮನ್ಸಾಲಿ ವೆಂಕಯ್ಯ ಶೆಟ್ಟಿ

ಮಾನ್ವಿ ಮೇ.5: ಪಟ್ಣಣದ ಉದ್ಯಮಿ ಮನ್ಸಾಲಿ ವೆಂಕಯ್ಯ ಶೆಟ್ಟಿ ಅವರು ‘ ಮಾನ್ವಿಯ ಜಗನ್ನಾಥದಾಸರು’ ಕುರಿತು ಪ್ರತಿ ವರ್ಷ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಸಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ನಿಧಿಗೆ ರೂ25ಸಾವಿರ ದೇಣಿಗೆ ನೀಡಿದ್ದಾರೆ. ಗುರುವಾರ ಮಾನ್ವಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 108ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮನ್ಸಾಲಿ ವೆಂಕಯ್ಯ ಶೆಟ್ಟಿ ಅವರು ರೂ.25ಸಾವಿರ ದೇಣಿಗೆಯ ಚೆಕ್ ಅನ್ನು ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿಕುಮಾರ ಪಾಟೀಲ್ ಅವರಿಗೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಮನ್ಸಾಲಿ ವೆಂಕಯ್ಯ ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ತಾ.ಪಂ‌ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ತಾಯಪ್ಪ ಬಿ.ಹೊಸೂರು, ಜಿಲ್ಲಾ ವಿಶೇಷ ಆಹ್ವಾನಿತರಾದ ಈರಣ್ಣ ಮರ್ಲಟ್ಟಿ ಹಾಗೂ ರಮೇಶಬಾಬು ಯಾಳಗಿ, ಜಿಲ್ಲಾ ಗೌರವ ಸದಸ್ಯ ಬಸವರಾಜ ಭೋಗಾವತಿ, ಹಿರಿಯ ಪತ್ರಕರ್ತ ಸಿ.ವಿ.ರಾಮಾಂಜನೇಯಲು ಮತ್ತು ಕಸಾಪ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.