ಮಾನ್ವಿ: ಸೆ.3ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ- ಶ್ರೀಶೈಲಗೌಡ

ಶ್ರೀಶೈಲಗೌಡ

ಸೆ.3ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ
ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ-ಶ್ರೀಶೈಲಗೌಡ
ಮಾನ್ವಿ, ಸೆ1:‘ಸೆ.3ರಂದು ಮಾನ್ವಿ ಪಟ್ಟಣದ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಶೈಲಗೌಡ ಹೇಳಿದರು.
ಗುರುವಾರ ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ವಾರ್ಷಿಕ ಮಹಾಸಭೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವಿವಿಧ ಇಲಾಖೆಗಳ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಎಚ್‌ಆರ್‌ಎಂಎಸ್ ಕುರಿತು ನೌಕರರಿಗೆ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು. ಎಂಬಿಬಿಎಸ್, ಬಿಎಎಂಎಸ್, ಇತರ ಉನ್ನತ ಶಿಕ್ಷಣ ಕೋರ್ಸ್ಗಳಿಗೆ ಆಯ್ಕೆಯಾದ ನೌಕರರ ಮಕ್ಕಳನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು. ತಹಶೀಲ್ದಾರ್ ಚಂದ್ರಕಾAತ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸರ್ಕಾರಿ ನೌಕರರ ಸಂಘದ ಮಾಜಿ ವಿಭಾಗೀಯ ಉಪಾಧ್ಯಕ್ಷ ಎ.ಬಾಲಸ್ವಾಮಿ ಕೊಡ್ಲಿ, ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುವರು. ತಾಲ್ಲೂಕಿನ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಅವರು ಮನವಿ ಮಾಡಿದರು.
ರಾಜ್ಯ ಪರಿಷತ್ ಸದಸ್ಯ ಪಿ.ಪ್ರಸಾದ್,  ಗೌರವಾಧ್ಯಕ್ಷ ಸುರೇಶ ಕುರ್ಡಿ, ಕಾರ್ಯದರ್ಶಿ ಹಂಪಣ್ಣ ಚಂಡೂರು, ಖಜಾಂಚಿ,ವೆಂಕಯ್ಯ ಶೆಟ್ಟಿ, ಗೌರವ ಸಲಹೆಗಾರ ವೆಂಕಣ್ಣ ಯಾದವ್, ಸಂಘಟನಾ ಕಾರ್ಯದರ್ಶಿ ಸುರೇಶಕುಮಾರ ಮಾನ್ವಿ,  ಉಪಾಧ್ಯಕ್ಷರಾದ ಅರುಣಕುಮಾರ ಹಾಗೂ ವಿನೋದಕುಮಾರ  ಇದ್ದರು.