
ರಾಯಚೂರು ನ.04: ಬೆಳಕು ಸಾಹಿತ್ಯ, ಶೈಕ್ಷಣಿಕ,ಸಾಂಸ್ಕೃತಿಕ ಟ್ರಸ್ಟ್ ವತಿಯಿಂದರಾ ಜ್ಯಮಟ್ಟದ ಕನ್ನಡ ಕಲರವ ಸಮ್ಮೇಳನ ನವಂಬರ್ 27ರಂದು ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕೋಟೆ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.ಸ ಮ್ಮೇಳನದಲ್ಲಿ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಶೇಷವಾಗಿ ಕನ್ನಡ ಫಲಕಗಳ ಪ್ರದರ್ಶನ, ಕವಿಗೋಷ್ಠಿ ಮತ್ತು ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಬೆಳಕು ಟ್ರಸ್ಟ್ ಅಧ್ಯಕ್ಷರಾದ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.