ನ.11ಕ್ಕೆ ಮಾನ್ವಿ ತಾಲೂಕಾ ಮಹಿಳಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ- ರವಿಕುಮಾರ ಪಾಟೀಲ್

ರವಿಕುಮಾರ ಪಾಟೀಲ್

ಮಾನ್ವಿ ನ.09: ಮಾನ್ವಿ ತಾಲೂಕು ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಹಿನ್ನೆಲೆಯಲ್ಲಿ ನ.11(ಶುಕ್ರವಾರ) ಮಧ್ಯಾಹ್ನ 2ಗಂಟೆಗೆ ತಾ.ಪಂ ಸಭಾಂಗಣದಲ್ಲಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯನ್ನು ಕರೆಯಲಾಗಿದೆ.ಕಾರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸಾಹಿತ್ಯಾಸಕ್ತರು,ಗುರು-ಹಿರಿಯರು, ಮಹಿಳೆಯರು,ಅಧಿಕಾರಿ ವರ್ಗದವರು, ಎಲ್ಲಾ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸದರಿ ಸಭೆಯಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವಿಕುಮಾರ ಪಾಟೀಲ್ ಮತ್ತು ಇತರ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.