ಮಾನ್ವಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಸಲೀಮ್ ಪಾಷಾ ಆಯ್ಕೆ

ಮಾನ್ವಿ:
ಮಾನ್ವಿ  ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ (ಪಿಕಾರ್ಡ್) ಬ್ಯಾಂಕಿನ ನೂತನಅಧ್ಯಕ್ಷರಾಗಿ ಸಲೀಮ್ ಪಾಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿವಶಂಕರಗೌಡ ಬಾಗಲವಾಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಲೀಮ್ ಪಾಷಾ ಮಾತ್ರ ನಾಮಪತ್ರ ಸಲ್ಲಿಸಿದರು. ಕಾರಣ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ನಯೀಮುದ್ದೀನ್ ಸಲೀಮ್ ಪಾಷಾ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಬ್ಯಾಂಕಿನ ನಿರ್ದೇಶಕ ಮಂಡಳಿಯ ಎಲ್ಲಾ ನಿರ್ದೇಶಕರು, ಕಾರ್ಯದರ್ಶಿ ರಾಜಪ್ಪ ಇದ್ದರು. ಕಾಂಗ್ರೆಸ್ ಪಕ್ಷದ ಮುಖಂಡರು ಸಲೀಮ್ ಪಾಷಾ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.