ಬೆಂಗಳೂರುಸೆ.13: ಬೆಂಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವ ಕವಿ ಸುಮಿತ್ ಮೇತ್ರಿ ಅವರಿಗೆ 2019ನೆಯ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸು
ಸುಮಿತ್ ಮೇತ್ರಿ ರಚಿಸಿರುವ “ಥಟ್ ಅಂತ ಬರೆದು ಕೊಡುವ ರಶೀದಿಯಲ್ಲ ಕವಿತೆ” ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಕರ್ನಾಟಕ ಸರ್ಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಹಿರಿಯ ಸಾಹಿತಿಗಳು ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ಕಂಬಾರ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಬಿ.ವಿ.ವಸಂತ ಕುಮಾರ್ ಮತ್ತಿತರ ಹಿರಿಯ ಸಾಹಿತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.