ಮಾನ್ವಿ:
ಮಾನ್ವಿ ತಾಲೂಕಿನ ಪೋತ್ನಾಳ್ ಗ್ರಾಮದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಕ ಮಾಡಬೇಕೆಂದು ಬಿಜೆಪಿ ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ನವೀನ್ ಕುಮಾರ್ ನಾಡಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ತಾಲೂಕಾ ಆರೋಗ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿರುವ ಅವರು ಪೋತ್ನಾಳ್ ಗ್ರಾಮವು ಸುತ್ತಮುತ್ತಲಿನ 30 ರಿಂದ 40 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರ ಸ್ಥಾನವಾಗಿದ್ದು ಪ್ರತಿದಿನ ಸಾವಿರಾರು ಜನರು ಈ ಗ್ರಾಮಕ್ಕೆ ಮತ್ತು ಸರ್ಕಾರಿ ಆಸ್ಪತ್ರೆಗೆ ನೂರಾರು ಬಡ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ, ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಖಾಯಂ ವೈಧ್ಯಾಧಿಕಾರಿಗಳು ಇಲ್ಲದೆ ಜನರು ತುಂಬಾ ತೊಂದರೆಯನ್ನು ಅನುಭವಿಸಬೇಕಾಗಿ ಬಂದಿದೆ ಎಂದು ಸಮಸ್ಯೆ ವಿವರಿಸಿದರು.
ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ಪೋತ್ನಾಳ್ ಗ್ರಾಮದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಸಾರ್ವಜನಿಕರೂಂದಿಗೆ ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನವೀನ್‍ಕುಮಾರ ನಾಡಗೌಡ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಟಿಪ್ಪು, ಗಿರಿನಾಯಕ, ಬಸವರಾಜ, ಶಿವರಾಜ ಉಪಸ್ಥಿತರಿದ್ದರು.